
ರಾಯಚೂರು: ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ.
ಚೌಡಮ್ಮ (34) ಎಂಬ ಮಹಿಳೆ ತನ್ನ ಮಕ್ಕಳಾದ 4 ವರ್ಷದ ರಾಮಣ್ಣ ಹಾಗೂ 3 ವರ್ಷದ ಮುತ್ತಣ್ಣ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.