
ಉಡುಪಿ: ಮಹಿಳೆಯೊಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲಿಯೇ ಹೈಡ್ರಾಮಾ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ.
ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಸರೋಜಾ ದಾಸ್ ಎಂಬ ಮಹಿಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಫ್ಯಾನ್ಸಿ ಅಂಗಡಿ ಇಟ್ಟಿದ್ದ ಮಹಿಳೆ ರಸ್ತೆ ಮೇಲೆ ವ್ಯಾಪಾರ ನಡೆಸುತ್ತಿದ್ದರು. ಇದರಿಂದ ಸಾರ್ವಜನಿಕರು, ವಾಹನ ಸವಾರರು ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯ ವಿಚಾರಿಸಲು ಮುಂದಾದಾಗ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮಹಿಳೆ ಯತ್ನಿಸಿದ್ದಾಳೆ. ಅಲ್ಲದೇ ಕೋಲಿನ ತುದಿಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.