alex Certify ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆ

ಬೆಂಗಳೂರು: ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬ್ಯಾಟರಾಯನದೊಡ್ಡಿ ನಿವಾಸಿ 38 ವರ್ಷದ ಮಹಿಳೆ ಮುನಿರತ್ನಮ್ಮ ಮೃತ ಮಹಿಳೆ. ತಂಗಿಯ ಮಗನನ್ನು ನಿನ್ನೆ ಸಂಜೆ ವಾಕಿಂಗ್ ಗೆ ಕರೆದೊಯ್ದಿದ್ದ ಮಹಿಳೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಎಷ್ಟು ಹೊತ್ತಾದರೂ ಇಬ್ಬರೂ ಮನೆಗೆ ಬಾರದಿದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಭೂತಾನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಬಾಲಕ ತಲೆ, ಕೈ-ಕಾಲಿಗೆ ಗಂಭೀರವಾದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಾಲಕ ಸಿಕ್ಕ ಜಾಗದಿಂದ ಸ್ವಲ್ಪ ದೂರದಲ್ಲೇ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಸ್ಥಳಕ್ಕೆ ಎಫ್ ಎಸ್ ಎಲ್ ತಂಡ, ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...