alex Certify BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಪತಿ ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಪತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮಹಿಳೆಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಯಲಹಂಕದ ಮನೆಯೊಂದರಲ್ಲಿ ಪತ್ತೆಯಾಗಿದೆ.

ರೇಖಾ ಮೃತ ಮಹಿಳೆ. ಯಲಹಂಕ ಉಪನಗರದ 3ನೇ ಹಂತದ ಮನೆಯಲ್ಲಿ ಈ ಘಟನೆ ನಡೆದಿದೆ. ಪತಿ ಅಭಿರಾಮ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಹಣ, ಒಡವೆ ಕೊಟ್ಟು ಅದ್ದೂರಿಯಾಗಿ ವಿವಾವಾಹ ಮಾಡಲಾಗಿತ್ತು. ಆದರೆ ಅಭಿರಾಮ್ ಪತ್ನಿ ರೇಖಾಗೆ ಮಾನಸಿಕ ಕಿರುಕುಳ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ರೇಖಾ ಕುಟುಂಬದವರು ಆರೋಪಿಸಿದ್ದಾರೆ. ಸೈಟ್ ವಿಚಾರವಾಗಿ ಪತ್ನಿಗೆ ಕಿರುಕುಳ ನೀಡಿದ್ದ ಎಂಬ ಆರೋಪವೂ ಕೇಳಿಬಂದಿದೆ.

ಇದೀಗ ಪತ್ನಿ ರೇಖಾ ಶವ ಮನೆಯಲ್ಲಿಯೇ ನೇಣುಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಅಭಿರಾಮ್ ವಿರುದ್ಧ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 304B, 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...