ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಸರ್ಜಾಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಬೇರೆ ಕಡೆ ಕೊಲೆ ಮಾಡಿ ಶವ ತಂದೆಸೆದಿರುವ ಶಂಕೆ ವ್ಯಕ್ತವಾಗಿದೆ.
ಮೂರು ದಿನಗಳಿಂದ ಈ ಭಾಗದಲ್ಲಿ ಕೆಟ್ಟ ವಾಸನೆ ಬರುತ್ತಿತ್ತು. ಸ್ಥಳೀಯರು ಸ್ಥಳೀಯ ಪೌರಕಾರ್ಮಿಕರಿಗೆ ದೂರು ನೀಡಿದ್ದು, ಪೌರಕಾರ್ಮಿಕರು ಚರಂಡಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮೊದಲಿಗೆ ಚರಂಡಿಯಲ್ಲಿ ಮೃತ ದೇಹದ ಕಾಲುಗಳು ಕಾಣಿಸಿಕೊಂಡಿದ್ದು, ನಂತರ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದೆ. ವೈರ್ ನಿಂದ ಕೈಕಾಲು ಕಟ್ಟಿ ಮಹಿಳೆಯನ್ನು ಕೊಲೆ ಮಾಡಿ ಶವ ಚರಂಡಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.