alex Certify BIG NEWS: ನಂಜುಂಡೇಶ್ವರನ ದರ್ಶನಕ್ಕೆಂದು ಬಂದ ಮಹಿಳೆ; ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಂಜುಂಡೇಶ್ವರನ ದರ್ಶನಕ್ಕೆಂದು ಬಂದ ಮಹಿಳೆ; ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಿಳೆ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ಮಂಜುಳಾ (50) ಮೃತ ಮಹಿಳೆ. ನವೆಂಬರ್ 7ರಂದು ಮೈಸೂರಿನ ಸುಭಾಷ್ ನಗರದ ಮನೆಯಿಂದ ಹೊರಟ ಮಹಿಳೆ ನಂಜನಗೂಡಿಗೆ ತೆರಳಿ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿದ್ದರು. ಮೂರು ದಿನಗಳಾದರೂ ಮಹಿಳೆ ವಾಪಾಸ್ ಆಗಿರಲಿಲ್ಲ.

ಮನೆಯವರು ಹುಡುಕಾಟ ನಡೆಸಿದ್ದರು. ಆದರೂ ಮಹಿಳೆ ಪತ್ತೆಯಾಗಿರಲಿಲ್ಲ. ಇಂದು ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆ ಮಂಜುಳಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...