ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ‘ಗೃಹಿಣಿ ಶಕ್ತಿ ಯೋಜನೆ’ ಘೋಷಣೆ ಮಾಡಲಾಗಿದ್ದು, ಈ ಯೋಜನೆ ಅಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 1000 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು.
ಮಹಿಳಾ ಕೃಷಿ ಕಾರ್ಮಿಕರಿಗೆ ಒಂದು ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬಜೆಟ್ ನಲ್ಲಿ 500 ರೂಪಾಯಿ ಘೋಷಣೆ ಮಾಡಲಾಗಿತ್ತು. ಅದರ ಬದಲಿಗೆ ಒಂದು ಸಾವಿರ ರೂಪಾಯಿ ನೀಡಲಾಗುವುದು. ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ.