alex Certify ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ “ಸಖಿ”(ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 1 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ, ವಿದ್ಯಾರ್ಹತೆ, ಗೌರವಧನದ ವಿವರ:

ಸೆಂಟರ್ ಅಡ್ಮಿನಿಸ್ಟ್ರೇಟರ್-1 ಹುದ್ದೆಗೆ ಎಂಎಸ್ ಡಬ್ಲ್ಯೂ/ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ, ಎಂಎಸ್ಸಿ ಗೃಹ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ(ಮಾನವ ಅಭಿವೃದ್ಧಿ ಮತ್ತು ಕುಟುಂಬ ಸಂಬಂಧ), ಎಂಎಸ್ಸಿ ಸೈಕಾಲಜಿ, ಎಂಎಸ್ಸಿ ಮನೋವೈದ್ಯಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕೌನ್ಸೆಲಿಂಗ್ ಕ್ಷೇತ್ರದಲ್ಲಿ ಕನಿಷ್ಟ ಐದು ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯವಾಗಿದೆ. ಮಾಸಿಕ 40,000 ರೂ. ವೇತನ ನೀಡಲಾಗುವುದು.

ಕೌನ್ಸಲರ್-(ಸೈಕೋ ಸೋಶಿಯಲ್ ಕೌನ್ಸೆಲಿಂಗ್) 1 ಹುದ್ದೆಗೆ ಎಂಎಸ್ ಡಬ್ಲ್ಯೂ, ಎಂಎಸ್ಸಿ ಗೃಹ ವಿಜ್ಞಾನ(ಮಾನವ ಅಭಿವೃದ್ಧಿ ಮತ್ತು ಕುಟುಂಬ ಸಂಬಂಧ), ಮನೋವಿಜ್ಞಾನ, ಮನೋವೈದ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕೌನ್ಸೆಲಿಂಗ್ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯವಾಗಿದೆ. ಮಾಸಿಕ 30,000 ರೂ. ವೇತನ ನೀಡಲಾಗುವುದು.

ಕೇಸ್ ವರ್ಕರ್/ಸಮಾಜ ಕಾರ್ಯಕರ್ತ-2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಬಿಎಸ್‌ಡಬ್ಲ್ಯೂ, ಬಿ.ಎ (ಸಮಾಜಶಾಸ್ತ್ರ) ಮಹಿಳಾ ಅಧ್ಯಯನದಲ್ಲಿ ಪದವೀಧರಾಗಿರಬೇಕು. ಎರಡು ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯ. ಮಾಸಿಕ 25,000 ರೂ.ವೇತನ ನೀಡಲಾಗುವುದು.

ಪ್ಯಾರಲೀಗಲ್ ಪರ್ಸನಲ್ /ಲಾಯರ್ – 2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಕಾನೂನು ಪದವಿ ಜೊತೆಗೆ 2-3 ವರ್ಷಗಳ ಅನುಭವ ಹೊಂದಿರಬೇಕು. ಮಾಸಿಕ 25,000 ರೂ. ವೇತನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಜಿಲ್ಲಾ ಬಾಲಭವನ ಆವರಣ, ಚಿತ್ರದುರ್ಗ ಇ-ಮೇಲ್ ddwcdcta@gmail.com  ಹಾಗೂ ದೂರವಾಣಿ ಸಂಖ್ಯೆ 08194-234579ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...