ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ಆರ್ಥಿಕ ಸಬಲತೆ ಸಾಧಿಸಲು ನಾಟಿ ಕೋಳಿ ಮರಿ ವಿತರಣೆ

ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.

ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರಿಗೆ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read