alex Certify ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್

ಬೆಂಗಳೂರು: ಏಪ್ರಿಲ್ 1 ರಿಂದ ಮಹಿಳಾ ನೌಕರರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ  ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿ, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕೆಂಬ ಉದ್ದೇಶದಿಂದ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಡುವ ಯೋಜನೆ ರೂಪಿಸಲಾಗಿದ್ದು, ಅಗತ್ಯವಾದರೆ ಇನ್ನಷ್ಟು ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಣಕಾಸು ಇತಿಮಿತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ನೌಕರರೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...