ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಹಿಳಾ ಸ್ವಸಹಾಯ ಗುಂಪುಗಳ ಉತ್ತೇಜನಕ್ಕೆ ಪಂಚಾಯತ್ ರಾಜ್ ಇಲಾಖೆ ಕ್ರಮ ಕೈಗೊಂಡಿದೆ. ಪಂಚಾಯತ್ ರಾಜ್ ಅಧಿನಿಯಮ ಅನ್ವಯ ನೂತನ ಯೋಜನೆ ಜಾರಿಗೊಳಿಸಲಾಗಿದೆ.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM) ನಡಿಯಲ್ಲಿಮಹಿಳಾ ಸ್ವಸಹಾಯ ಗುಂಪುಗಳ 20 ಲಕ್ಷ ರೂಪಾಯಿ ಕಾಮಗಾರಿ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಎನ್.ಆರ್.ಎಲ್.ಎಂ. ಅಡಿಯಲ್ಲಿ ಸ್ಥಾಪನೆಯಾದ ಗ್ರಾಮೀಣ ಮಹಿಳಾ ಸ್ವಸಹಾಯ ಗುಂಪುಗಳ ಪುನಶ್ಚೇತನಕ್ಕೆ 20 ಲಕ್ಷ ರೂ. ವರೆಗೆ ಕಾಮಗಾರಿ ನೀಡುವ ಯೋಜನೆ ಜಾರಿ ಕಡತಕ್ಕೆ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಸಹಿ ಹಾಕಿದ್ದಾರೆ. ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಕಾಮಗಾರಿ ನೀಡುವ ಬಗ್ಗೆ ಗುಂಪುಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.