ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಧನಶ್ರೀ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ.
2023-24 ನೇ ಸಾಲಿಗೆ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಡಿ ಸೇವಾಸಿಂಧು ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಡಿ.22 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಧನಶ್ರೀ ಯೋಜನೆಗಳಿಗೆ ಮಾತ್ರ ಡಿ.29 ವರೆಗೆ ಅರ್ಜಿ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ದಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಕಚೇರಿ ಶಿವಮೊಗ್ಗ ಹಾಗೂ ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ದೂ.ಸಂ: 08182-295514 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.