ಬೆಂಗಳೂರು : ಶಕ್ತಿ ಯೋಜನೆಯ ‘ಸ್ಮಾರ್ಟ್ ಕಾರ್ಡ್’ ಪಡೆಯಲು ಮತ್ತೆ 6 ತಿಂಗಳು ಅವಧಿ ವಿಸ್ತರಣೆ ಮಾಡಲಾಗಿದೆ.
ಹೌದು, ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದ್ದು, ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯುವುದು ಕಡ್ಡಾಯವಾಗಿತ್ತು . ಆದ್ದರಿಂದ ಸ್ಮಾರ್ಟ್ ಕಾರ್ಡ್ ಪಡೆಯೋದಕ್ಕೆ ನೀಡಲಾಗಿದ್ದಂತ ಅವಧಿಯನ್ನು 6 ತಿಂಗಳು ವಿಸ್ತರಿಸಲಾಗಿದೆ. ಈ ಬಗ್ಗೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಶಕ್ತಿ ಯೋಜನೆಯ ಅಡಿಯಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸೋದಕ್ಕೆ ಈ ಹಿಂದೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿತ್ತು. ಶಕ್ತಿ ಸ್ಮಾರ್ಟ್ ಕಾರ್ಡ್ ಗಡುವನ್ನು ಮತ್ತೆ ಆರು ತಿಂಗಳು ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಇನ್ನೂ ಕೂಡ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ. ಇನ್ನೂ, ಮಹಿಳೆಯರಿಗೆ ಬಿಗ್ ಶಾಕ್ ಎನ್ನುವಂತೆ ಪ್ರತಿ ಕಾರ್ಡ್ ಗೆ ರೂ.14.16 ಪೈಸೆ ಸೇವಾ ಶುಲ್ಕ ವಿಧಿಸೋದಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದ್ದ ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ಬರುವವರೆಗೆ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅನುಮತಿ ನೀಡಿದೆ.