ಬೆಂಗಳೂರು: ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇಕಡ 33 ರಷ್ಟು ಮಹಿಳಾ ಮೀಸಲಾತಿ ಪಾಲಿಸುವಂತೆ ಆದೇಶಿಸಲಾಗಿದೆ.
ಡಾಟಾ ಎಂಟ್ರಿ ಆಪರೇಟರ್, ಡಿ ಗ್ರೂಪ್ ಹುದ್ದೆಗಳು ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳು ಹೊರಗುತ್ತಿಗೆ ನೇಮಕಾತಿಯಲ್ಲಿ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶಿಸಿದ್ದಾರೆ.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿಯಂತಹ ಗ್ರೂಪ್-ಡಿ ಹುದ್ದೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ, ಸಮಾನ ಅವಕಾಶ ಒದಗಿಸುವ ದೃಷ್ಟಿಯಿಂದ ನೇರ ನೇಮಕಾತಿ ಹುದ್ದೆಗಳಲ್ಲಿ ಶೇಕಡ 33 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಬೇಕು.
ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯ, ಸ್ಥಳೀಯ ಸಂಸ್ಥೆಗಳು, ಸರ್ಕಾರಿ ವಲಯದ ಅಂಗ ಸಂಸ್ಥೆಗಳು ಸೇರಿದಂತೆ ಎಲ್ಲಾ ಇಲಾಖೆಗಳಿಗೂ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.