ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ಲಿಂಗ ತಾರತಮ್ಯವನ್ನು ಖಂಡಿಸಿದ್ದ ಸುಪ್ರೀಂ ಕೋರ್ಟ್ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡುವಂತೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಶಸ್ತ್ರ ಪಡೆಗಳು ಕ್ರಮ ಕೈಗೊಂಡಿವೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಆದರೆ ಈ ಒಂದು ವರ್ಷದ ಮಹಿಳಾ ಪ್ರವೇಶಾತಿಯಿಂದ ವಿನಾಯ್ತಿ ನೀಡುವಂತೆ ಸುಪ್ರೀಂ ಕೋರ್ಟ್ ಬಳಿ ಕೇಂದ್ರ ಸರ್ಕಾರ ಮನವಿ ಮಾಡಿದೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ನೌಕಾ ಅಕಾಡೆಮಿಗಳಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲು ಅನುಮತಿಸುವ ಪ್ರಸ್ತಾಪಕ್ಕೆ ಐಎಎಫ್ ಹಾಗೂ ನೌಕಾ ಪಡೆ ಮುಖ್ಯಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಹೇಳಿದೆ.
ಮಹಿಳೆಯರೂ ಎನ್ಡಿಎಗೆ ಸೇರ್ಪಡೆಯಾಗಿದೆ ಎಂಬ ವಿಚಾರವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಸುಪ್ರೀಂ ಕೋರ್ಟ್ಗೆ ಹೇಳಿದ್ದಾರೆ .