ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ ನ ಒಂಬತ್ತನೇ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಜಯಭೇರಿಯಾಗುವ ಮೂಲಕ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.
ಇಂದು ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಗುಜರಾತ್ ಜೈಂಟ್ಸ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಈ ತಂಡಕ್ಕೆ ಇಂದು ಗೆಲ್ಲಲೇಬೇಕಾದ ಅನಿವಾರ್ಯವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂತಿಮ ಪಂದ್ಯವಿರಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯು ಪಿ ವಾರಿಯರ್ಸ್ ಸೆಣಸಾಡಲಿವೆ.