ನವದೆಹಲಿ: ಡಬ್ಲ್ಯುಪಿಎಲ್ (ವುಮೆನ್ಸ್ ಪ್ರೀಮಿಯರ್ ಲೀಗ್) 2024 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಮೆಂಟ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
2024ರ ಡಬ್ಲ್ಯುಪಿಎಲ್ ಫೆಬ್ರವರಿ 23ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯ ಮಾರ್ಚ್ 17ರಂದು ನವದೆಹಲಿಯಲ್ಲಿ ನಡೆಯಲಿದೆ.
2024ರ ಡಬ್ಲ್ಯುಪಿಎಲ್ನಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿವೆ. ಫೈನಲ್ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7:30 ರಿಂದ ಪ್ರಾರಂಭವಾಗಲಿದ್ದು, ಎಲಿಮಿನೇಟರ್ ಮಾರ್ಚ್ 15 ರಂದು ನಡೆಯಲಿದೆ.
WPL 2024: ಸಂಪೂರ್ಣ ವೇಳಾಪಟ್ಟಿ
ಫೆಬ್ರವರಿ 23: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್
ಫೆಬ್ರವರಿ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಯುಪಿ ವಾರಿಯರ್ಸ್
ಫೆಬ್ರವರಿ 25: ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್
ಫೆಬ್ರವರಿ 26: ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್
ಫೆಬ್ರವರಿ 27: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್
ಫೆಬ್ರವರಿ 28: ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್
ಫೆಬ್ರವರಿ 29: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್
ಮಾರ್ಚ್ 1: ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್
ಮಾರ್ಚ್ 2: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್
ಮಾರ್ಚ್ 3: ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್
ಮಾರ್ಚ್ 4: ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಮಾರ್ಚ್ 5: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್
ಮಾರ್ಚ್ 6: ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಮಾರ್ಚ್ 7: ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್’ ಮಾರ್ಚ್ 8: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್
ಮಾರ್ಚ್ 9: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್
ಮಾರ್ಚ್ 10: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಮಾರ್ಚ್ 11: ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್
ಮಾರ್ಚ್ 12: ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಮಾರ್ಚ್ 13: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್
ಮಾರ್ಚ್ 15: ದೆಹಲಿಯಲ್ಲಿ ಎಲಿಮಿನೇಟರ್
ಮಾರ್ಚ್ 17: ದೆಹಲಿಯಲ್ಲಿ ಫೈನಲ್