
ವುಮೆನ್ಸ್ ಪ್ರೀಮಿಯರ್ ಲೀಗ್ ನ ಪ್ರತಿಯೊಂದು ಪಂದ್ಯಗಳು ರೋಚಕತೆಯಿಂದ ಸಾಗುತ್ತಿದ್ದು, ಒಳ್ಳೆಯ ಮನರಂಜನೆ ನೀಡುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಗೆ ಹೆಸರುವಾಸಿಯಾಗಿದ್ದು, ಇತ್ತೀಚಿನ ಪಂದ್ಯಗಳಲ್ಲಿ ಬೌಲರ್ಗಳೇ ಗಮನ ಸೆಳೆಯುತ್ತಿದ್ದಾರೆ. ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿಯಾಗುತ್ತಿವೆ.
ಆರ್ಸಿಬಿ ತಂಡ ತನ್ನ ಮೊದಲ ಪಂದ್ಯದಲ್ಲಿ ಕೆಲವೇ ಅಂತರದಿಂದ ಜಯಭೇರಿ ಆಗಿದ್ದು, ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಇನ್ನು ಗುಜರಾತ್ ಕಳೆದ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದ್ದು, ಇದರಿಂದ ಹೊರಬರಲು ನೋಡುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮನೆಯಂಗಳದಲ್ಲಿ ಮತ್ತೊಂದು ಜಯ ಸಾಧಿಸಲಿದೆಯಾ ಕಾದು ನೋಡಬೇಕಾಗಿದೆ. ಈ ಎರಡು ಘಟಾನುಘಟಿಗಳ ನಡುವಿನ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ.