ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಪಾಯಿಂಟ್ ಟೇಬಲ್ ನಲ್ಲಿ ಮೊದಲನೇ ಸ್ಥಾನಕೇರಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಪಂದ್ಯಗಳು ಇಂದಿಗೆ ಮುಕ್ತಾಯವಾಗಲಿದೆ. ನಾಳೆಯಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ನ ಬಹುತೇಕ ಪಂದ್ಯಗಳು ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿವೆ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಡೆಯ ಪದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯು ಪಿ ವಾರಿಯರ್ಸ್ ಮುಖಾಮುಖಿಯಾಗಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ತನ್ನ ಓಂ ಗ್ರೌಂಡ್ ನಲ್ಲಿ ಗೆಲುವಿನ ನಗೆ ಬೀರಲಿದೆಯಾ ಕಾದು ನೋಡಬೇಕಾಗಿದೆ. ಎರಡು ತಂಡಗಳು ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ.