alex Certify ಮಹಿಳಾ ಮೀಸಲಾತಿ ಮಸೂದೆ, ಕ್ರೀಡೆ, ಆಸ್ಕರ್ ಪ್ರಶಸ್ತಿ: 2023ರ ಪ್ರಮುಖ ಘಟನೆಗಳ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಮೀಸಲಾತಿ ಮಸೂದೆ, ಕ್ರೀಡೆ, ಆಸ್ಕರ್ ಪ್ರಶಸ್ತಿ: 2023ರ ಪ್ರಮುಖ ಘಟನೆಗಳ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ರೇಡಿಯೊ ಪ್ರಸಾರದ ‘ಮನ್ ಕಿ ಬಾತ್’ ಕಾರ್ಯಕ್ರಮದ 108 ನೇ ಆವೃತ್ತಿಯ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು,

ಇದು 2023 ರ ಕೊನೆಯ ಆವೃತ್ತಿಯಾಗಿದೆ. ‘108’ ಸಂಖ್ಯೆಯ ಮಹತ್ವವನ್ನು ಪ್ರಧಾನಿ ವಿವರಿಸಿ, ದೇಶವಾಸಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು.

ಜನರು 2023 ರ ತಮ್ಮ ನೆನಪುಗಳನ್ನು ತಮ್ಮೊಂದಿಗೆ ಪತ್ರಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಹೇಳಿದ ಅವರು, ಈ ವರ್ಷ ದೇಶವು ಹಲವಾರು ಪುರಸ್ಕಾರಗಳಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಇಂದಿಗೂ ಜನರು ಚಂದ್ರಯಾನ-3 ರ ಯಶಸ್ಸಿಗೆ ನನ್ನನ್ನು ಅಭಿನಂದಿಸುತ್ತಾ ಸಂದೇಶಗಳನ್ನು ಕಳುಹಿಸುತ್ತಾರೆ. ನನ್ನಂತೆಯೇ ನೀವು ನಮ್ಮ ವಿಜ್ಞಾನಿಗಳ ಬಗ್ಗೆ, ವಿಶೇಷವಾಗಿ ನಮ್ಮ ಮಹಿಳಾ ವಿಜ್ಞಾನಿಗಳ ಬಗ್ಗೆ ಹೆಮ್ಮೆಪಡುತ್ತೀರಿ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದರು.

‘ಆರ್‌ಆರ್‌ಆರ್‌’ ಚಿತ್ರದ ‘ನಾಟು ನಾಟು’, ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಆಸ್ಕರ್‌ ಪ್ರಶಸ್ತಿ ಬಂದಿರುವುದನ್ನು ಪ್ರಧಾನಿ ನೆನಪಿಸಿಕೊಂಡರು. 2023ರಲ್ಲಿ ಅಥ್ಲೀಟ್‌ಗಳು ಕೂಡ ರಾಷ್ಟ್ರಕ್ಕೆ ಕೀರ್ತಿ ತಂದಿದ್ದು, 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇದೇ ರೀತಿಯ ಪ್ರದರ್ಶನವನ್ನು ದೇಶ ಎದುರು ನೋಡುತ್ತಿದೆ ಎಂದು ಪ್ರಧಾನಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...