alex Certify ಮಹಿಳಾ ಟಿ20 ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಟಿ20 ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ

ಏಕದಿನ ಸರಣಿ ಹಾಗೂ ಟೆಸ್ಟ್ನಲ್ಲಿ ಹೀನಾಯ ಸೋಲನುಭವಿಸಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಟಿ ಟ್ವೆಂಟಿ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಿದೆ. ಮೊನ್ನೆ ಅಷ್ಟೇ ಚೆನ್ನೈನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ಎದುರು ಕೇವಲ 12 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ.

ಇಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು,  ಮಹಿಳಾ ಭಾರತ ತಂಡಕ್ಕೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಜಯಭೇರಿಯಾದರೆ ಸರಣಿಯನ್ನು ಸಮ ಬಲಗೊಳಿಸಬಹುದಾಗಿದೆ.

ಇನ್ನೂ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯವನ್ನು ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಒಟ್ಟಾರೆ  ಉಭಯ ತಂಡಗಳ ನಡುವೆ ಇಂದು ಭರ್ಜರಿ ಹೋರಾಟ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...