ತಮಿಳುನಾಡಿನ ಕೊಯಮತ್ತೂರು ಬಿಜೆಪಿ ಕಚೇರಿ ಬಳಿ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯನ್ನು ಖಂಡಿಸಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ, ಇಂತಹ ಘಟನೆಗಳಿಂದ ನಮ್ಮ ಕಾರ್ಯಕರ್ತರನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ದೇಶದ್ರೋಹ ಬಗೆಯುವ ಇಂತಹ ಶಕ್ತಿಗಳ ವಿರುದ್ಧ ಕಠಿಣವಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ತಡೆಯಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.
ಪೆಟ್ರೋಲ್ ಬಾಂಬ್ ದಾಳಿಯಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಮಿಳುನಾಡಿನ ಹಲವು ಕಡೆಗಳಲ್ಲಿ PFI ಕಚೇರಿಗಳು ಮತ್ತು ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ವಿಕೆ ಮೆನನ್ ರಸ್ತೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಕಚೇರಿ ಮೇಲೆ ಬಾಟಲಿ ಎಸೆಯುತ್ತಿರುವುದು ಕಂಡುಬಂದಿದೆ. ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ಮುಖಂಡರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.