
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಈ ಕುರಿತಾಗಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಶೇಕಡ 4ರಷ್ಟು ಮೀಸಲಾತಿ ನೀಡಲಾಗುವುದು. ಹಿಂದುಳಿದ, ಇತರೆ ಹಿಂದುಳಿದ ವರ್ಗಗಳಿಗೆ ಮಾತ್ರ ಮೀಸಲಾತಿ ಇತ್ತು. ಮುಸ್ಲಿಂ ಸಮಾಜಕ್ಕೆ ಮೀಸಲಾತಿಯನ್ನು ಸರ್ಕಾರ ವಿಸ್ತರಿಸಿದೆ.
ಬಜೆಟ್ ಘೋಷಣೆಯಂತೆ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಹಿಂದುಳಿದ ವರ್ಗಗಳಿಗೆ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೂ ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಕಾಮಗಾರಿಗಳ ಮೊತ್ತವನ್ನು 2 ಕೋಟಿ ರೂಪಾಯಿಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.