alex Certify ರಾಮನವಮಿ ದಿನವೇ ಶ್ರೀರಾಮನ ಭಕ್ತರಿಗೆ ಸಿಹಿ ಸುದ್ದಿ: ಡಿ. 2023 ರೊಳಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮನವಮಿ ದಿನವೇ ಶ್ರೀರಾಮನ ಭಕ್ತರಿಗೆ ಸಿಹಿ ಸುದ್ದಿ: ಡಿ. 2023 ರೊಳಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ರಾಮನವಮಿ ದಿನವಾದ ಇಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರು ಹೇಳಿದ್ದಾರೆ.

ವೇದಾಂತ ಇಂಡಿಯಾ ಸಂಸ್ಥೆಯು ಲಕ್ನೋ ಶುಗರ್‌ ಕೇನ್ ಇನ್‌ ಸ್ಟಿಟ್ಯೂಟ್‌ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಂಪತ್ ರೈ ಲಕ್ನೋಗೆ ಬಂದಿದ್ದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

2024 ರ ಲೋಕಸಭಾ ಚುನಾವಣೆಯ ಕಾರಣ, ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಕಲ್ಲಿನ ಕೆಲಸವು ಸಮಯ ತೆಗೆದುಕೊಳ್ಳುತ್ತದೆ, ದೇವಾಲಯದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ. 2023 ರಿಂದ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ಚಂಪತ್ ರಾಯ್ ಹೇಳಿದರು.

ಈ ಹಿಂದೆ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ದೇವಾಲಯದ ಕೆಲಸಕ್ಕೆ ಅಡಚಣೆಯಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 5, 2020 ರಂದು ಭೂಮಿ ಪೂಜೆ ನೆರವೇರಿಸಿದ ನಂತರ ಮತ್ತು ದೇವಾಲಯದ ಶಂಕುಸ್ಥಾಪನೆ ಮಾಡಿದ ನಂತರ ಅಯೋಧ್ಯೆಯಲ್ಲಿ ರಾಮ ಮಂದಿರದ ಕೆಲಸ ಪ್ರಾರಂಭವಾಯಿತು. ಐದು ಎಕರೆ ಜಾಗದಲ್ಲಿ ದೇವಾಲಯ ನಿರ್ಮಾಣವಾಗುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಂದಿರ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...