ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು ಅಮಿತ್ ಚಾಂಗ್ (32) ಎಂದು ಗುರುತಿಸಲಾಗಿದೆ.
ಅಮಿತ್ ಚಾಂಗ್ ನಿನ್ನೆ ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿದ್ದನು. ನಂತರ ಕಟ್ಟಡದ ಮೇಲೆ ಮಲಗಿದ್ದ. ಮಧ್ಯರಾತ್ರಿ ಆಯತಪ್ಪಿ ಕಟ್ಟಡದಿಂದ ಬಿದ್ದಿದ್ದಾನೆ. ಮೇಲಿಂದ ಬಿದ್ದ ರಭಸಕ್ಕೆ ಅಮಿತ್ ತಲೆಗೆ ತೀವ್ರ ಪೆಟ್ಟಾಗಿತ್ತು. ಬೆಳಗ್ಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.