ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ.
ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಕೊಪ್ಪಳ ತಾಲೂಕಿನ ಹಿಟ್ನಾಳ ನಿವಾಸಿಯಾಗಿದ್ದು, ಮೇ 28 ರಂದು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ BFG ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದರು.
ಅವರನ್ನು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.