
ಲಖ್ನೋ: ಡಾಬಾ ಬಳಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ 18 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಪಲ್ವಲ್ ನಿಂದ ಬಿಹಾರಕ್ಕೆ ಕಾರ್ಮಿಕರಿದ್ದ ಬಸ್ ತೆರಳುತ್ತಿದ್ದು, ಡಾಬಾ ಬಳಿ ಊಟಕ್ಕೆ ನಿಲ್ಲಿಸಲಾಗಿತ್ತು. ಇದೇ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 18 ಕಾರ್ಮಿಕರು ಮೃತಪಟ್ಟು, ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ತಡರಾತ್ರಿ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದಿದೆ. 19 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನ ಕೆಳಗೆ ಸಿಲುಕಿರುವ ಮೃತ ದೇಹಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಲಕ್ನೋ ವಲಯ ಎಡಿಜಿ ಸತ್ಯನಾರಾಯಣ್ ಸಬತ್ ತಿಳಿಸಿದ್ದಾರೆ.