ಮಡಿಕೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3 ಸಾವಿರ ರೂ.ನೀಡಲಾಗುತ್ತದೆ.
ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಈಗಾಗಲೇ 3 ಸಾವಿರ ರೂ. ಮೊತ್ತವನ್ನು ನೇರ ನಗದು ವರ್ಗಾವಣೆ (DBT Aadhaar) ಮೂಲಕ ಪಾವತಿಸಲು E- Governance ಇಲಾಖೆಗೆ ಕಳುಹಿಸಲಾಗಿದ್ದು. ಸದರಿ ಕಳುಹಿಸಲಾದ ಡೇಟಾದಲ್ಲಿ ಶೇ.90 ರಷ್ಟು ಪಾವತಿಯಾಗಿರುತ್ತದೆ. ಉಳಿದ ಶೇ.10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗಿರುವುದಿಲ್ಲ. ಬ್ಯಾಂಕ್ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್ಪಿಸಿಎಲ್ಗೆ ಮ್ಯಾಪಿಂಗ್ ಮಾಡಿರುವುದಿಲ್ಲ. ಆದ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ ಸಹಾಯಧನ ಮೊತ್ತವು ಪಾವತಿಯಾಗಿರುವುದಿಲ್ಲ.
ಆದ್ದರಿಂದ ಇದುವರೆಗೂ ಕೋವಿಡ್-19, 2ನೇ ಅಲೆಯ ಒಂದು ಬಾರಿ ಸಹಾಯಧನ 3 ಸಾವಿರ ರೂ. ಮಂಡಳಿಯಿಂದ ಸ್ವೀಕರಿಸದೇ ಇರುವ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆ ಆಗಿರುವ ಬಗ್ಗೆ ಹಾಗೂ ಬ್ಯಾಂಕ್ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್ಪಿಸಿಎಲ್ (NPCL) ಗೆ ಮ್ಯಾಪಿಂಗ್ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಅಗತ್ಯ ದಾಖಲಾತಿಯನ್ನು ನವೆಂಬರ್, 30 ರೊಳಗೆ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಹಿರಿಯ ಕಾರ್ಮಿಕ ನಿರೀಕ್ಷಕರು, ವಿರಾಜಪೇಟೆ ವೃತ್ತ, ಹಿರಿಯ ಕಾರ್ಮಿಕ ನಿರೀಕ್ಷಕರು, ಸೋಮವಾರಪೇಟೆ ವೃತ್ತ, ಇಲ್ಲಿಗೆ ಸಲ್ಲಿಸಬಹುದಾಗಿದೆ. ನೋಂದಾಯಿತ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದೆ.