ಬೆಂಗಳೂರು: ಹಣಕಾಸು ಖಾತೆ ಹೊಂದಿದ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾರ್ಮಿಕ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಕಾರ್ಮಿಕರ ಆರೋಗ್ಯ ಸುರಕ್ಷತೆಗೆ ಇಎಸ್ಐ ಚಿಕಿತ್ಸಾಲಯಗಳ ಸ್ಥಾಪನೆ, ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪನೆ ಸೇರಿದಂತೆ ಹಲವು ಯೋಜನೆ ಘೋಷಿಸಲಾಗಿದೆ. ಇಎಸ್ಐ ಆಸ್ಪತ್ರೆಗಳನ್ನು ಇನ್ನಷ್ಟು ಬಲಪಡಿಸಲು 7 ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪನೆ ಮಾಡಲಾಗುವುದು, ಆರು ಆಸ್ಪತ್ರೆಗಳಲ್ಲಿ ಆಯುಷ್ ಘಟಕಗಳನ್ನು ಆರಂಭಿಸಲಿದ್ದು, ಜಿಲ್ಲೆಗಳಿಗೆ ತಲಾ ಒಂದು ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಾಗಿ ಉನ್ನತೀಕರಿಸಲು ಕೇಂದ್ರ ಕಾರ್ಮಿಕ ಮಂತ್ರಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.
ನೋಂದಾಯಿತ 75 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಬಳಸಿಕೊಂಡು ವಿಶೇಷ ಯೋಜನೆ ಜಾರಿಗೊಳಿಸಲಾಗುವುದು. ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಒದಗಿಸುತ್ತಿರುವ ಎಲ್ಲಾ ಸೇವೆಗಳನ್ನು ಸುಲಭ ಮತ್ತು ಸಕಾಲದಲ್ಲಿ ಒದಗಿಸಲು ಹೊಸ ಆನ್ಲೈನ್ ತಂತ್ರಾಂಶ ಅಭಿವೃದ್ದಿಪಡಿಸಲಾಗುವುದು.
ಆಸ್ತಿ ತೆರಿಗೆ ಮೇಲೆ ವಿಧಿಸಿರುವ ಸೆಸ್ ಪ್ರಮಾಣವನ್ನು ಹೆಚ್ಚಳ ಮಾಡದೆ ಆಂತರಿಕವಾಗಿ ಮಾರ್ಪಾಡುಗೊಳಿಸಿ ಈ ಸೆಸ್ ಮುಖಾಂತರ ನೋಂದಾಯಿತ 75 ಲಕ್ಷಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.