ಬೆಂಗಳೂರು: ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022- 23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಬಡ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ನಾವು ಕಾರ್ಮಿಕರ ಮಕ್ಕಳಿಗೆ ಸಹಾಯಧನ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. 9:60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಮಾಡುತ್ತಿದ್ದು, ಇದರ ಸದ್ಬಳಕೆ ಮಾಡಿಕೊಂಡು ಶಿಕ್ಷಿತರಾಗಬೇಕು ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕಾರ್ಮಿಕರ ಸಲಹೆಗಳನ್ನು ನೀಡಿದಲ್ಲಿ ಅದಕ್ಕೆ ತಕ್ಕಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸಂತೋಷ್ ಲಾಡ್, ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವರು ಇದ್ದರು.