ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ. ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು, ಪದವಿ ವಿದ್ಯಾರ್ಥಿಗಳು, ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೂ ಸಹಾಯಧನ ನೀಡಲಾಗುತ್ತದೆ.
ನರ್ಸರಿ ಮತ್ತು ಎಲ್.ಕೆ.ಜಿ. ಮಕ್ಕಳಿಗೆ ವಾರ್ಷಿಕ 5000 ರೂ.
1 ರಿಂದ 4ನೇ ತರಗತಿಯವರೆಗೆ 5000 ರೂ.
5 ರಿಂದ 8 ನೇ ತರಗತಿ ಮಕ್ಕಳಿಗೆ 8000 ರೂ.
9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ 12,000 ರೂ.
ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ.
ಐಟಿಐ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ 20,000 ರೂ.
ಯಾವುದೇ ಪದವಿ ವಿದ್ಯಾರ್ಥಿಗಳಿಗೆ 35,000 ರೂ.
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ರೂ.
ಇಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 60,000 ರೂ.
ವೈದ್ಯಕೀಯ, ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ 60,000 ರೂ.
ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ 75,000 ರೂ. ನೀಡಲಾಗುವುದು.
ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲು ‘ಕಲಿಕೆ ಭಾಗ್ಯ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಸಹಾಯಧನ ಒದಗಿಸಲಾಗುವುದು ಎಂದು ಹೇಳಲಾಗಿದೆ.