alex Certify ‘ಶಾಕಿಂಗ್’ ನ್ಯೂಸ್: ತಡರಾತ್ರಿ ಮೂತ್ರ ವಿಸರ್ಜನೆ ವೇಳೆ ‘ವಿದ್ಯುತ್’ ಪ್ರವಹಿಸಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶಾಕಿಂಗ್’ ನ್ಯೂಸ್: ತಡರಾತ್ರಿ ಮೂತ್ರ ವಿಸರ್ಜನೆ ವೇಳೆ ‘ವಿದ್ಯುತ್’ ಪ್ರವಹಿಸಿ ಇಬ್ಬರು ಸಾವು

ಬೆಂಗಳೂರು: ಮೂತ್ರ ವಿಸರ್ಜನೆ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ತಡರಾತ್ರಿ ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರಿಯಪ್ಪ ಮತ್ತು ನಾಗರಾಜ ಮೃತಪಟ್ಟ ಕಾರ್ಮಿಕರು ಎಂದು ಹೇಳಲಾಗಿದೆ. ಒಂದು ವರ್ಷದಿಂದ ಒಜಾಸ್ ಕಂಪನಿಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ಮಲ್ಲಸಂದ್ರ ಸಮೀಪ ರಾಜಕಾಲುವೆ ಕೆಲಸ ಮುಗಿಸಿ ಹೆಚ್ಎಸ್ಆರ್ ಲೇಔಟ್ ನಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ.

ಲಾಲ್ ಭಾಗ್ ರಸ್ತೆಯ ನಾಲೆಯ ಸಮೀಪ ಕೆಲಸ ಮಾಡುತ್ತಿದ್ದ ಜೊತೆಗಾರರನ್ನು ಕರೆದುಕೊಂಡು ಹೋಗಲು ಬಂದಿದ್ದ ಕರಿಯಪ್ಪ ಮತ್ತು ನಾಗರಾಜ್ ಸಮೀಪದಲ್ಲೇ ಮೂತ್ರ ವಿಸರ್ಜನೆ ಮಾಡುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...