alex Certify ಆಕಸ್ಮಿಕ ಅನಾಹುತ: ಕಾರ್ಮಿಕನ ಜೀವಂತ ಸಮಾಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕಸ್ಮಿಕ ಅನಾಹುತ: ಕಾರ್ಮಿಕನ ಜೀವಂತ ಸಮಾಧಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಗೋಕರ್ಣದ ಗೌಡಗೇರಿ ಬಳಿ ನಡೆದ ಅವಘಡದಲ್ಲಿ ಕಾರ್ಮಿಕ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.

ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಆಕಸ್ಮಿಕವಾಗಿ ಬಿದ್ದ ಮಣ್ಣಿನ ರಾಶಿಯಡಿ ಸಿಲುಕಿ ಜೀವ ಕಳೆದುಕೊಂಡಿದ್ದಾರೆ. ಮೋಹನದಾಸ ನಾಯಕ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಜೆಸಿಬಿ ಚಾಲಕ ಮಣ್ಣು ತೆಗೆಯುವ ಸಂದರ್ಭದಲ್ಲಿ ನಿರ್ಲಕ್ಷ ತೋರಿದ್ದೇ ಘಟನೆಗೆ ಕಾರಣವೆನ್ನಲಾಗಿದೆ.

ಚಾಲಕ ಗಮನಿಸದೇ ಮೋಹನದಾಸ ನಿಂತಿದ್ದ ಸ್ಥಳದಲ್ಲಿ ಮಣ್ಣು ತೆಗೆದಿದ್ದಾರೆ. ಇದರಿಂದಾಗಿ ಮೋಹನದಾಸ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜೆಸಿಬಿ ಚಾಲಕ ಮನೋಜ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...