alex Certify ಕರ್ತವ್ಯದ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಫ್ಯಾನ್ ಬಿದ್ದು ಕಾರ್ಮಿಕ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ತವ್ಯದ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಫ್ಯಾನ್ ಬಿದ್ದು ಕಾರ್ಮಿಕ ದಾರುಣ ಸಾವು

 ಬಳ್ಳಾರಿ: ಫ್ಯಾನ್ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಜೆ.ಎಸ್.ಡಬ್ಲ್ಯೂ. ಸ್ಟೀಲ್ ಪ್ಲಾಂಟ್ ನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಜಿತೇಂದ್ರ ಸಿಂಗ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ.

ಬಳ್ಳಾರಿ ಜಿಲ್ಲೆ ತೋರಣಗಲ್ಲು ವಿದ್ಯಾನಗರ ಜೆ.ಎಸ್.ಡಬ್ಲ್ಯೂ. ಸ್ಟೀಲ್ ಪ್ಲಾಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಫ್ಯಾನ್ ಏಕಾಏಕಿ ಕೆಳಗೆ ಬಿದ್ದಿದ್ದು ಅಕ್ಕಪಕ್ಕದಲ್ಲಿದ್ದ ಸರಳುಗಳು ಜಿತೇಂದ್ರ ಸಿಂಗ್ ಅವರಿಗೆ ಚುಚ್ಚಿಕೊಂಡಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...