ಬೆಂಗಳೂರು: ಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ರೂಪಿಸಿದ 4 ಕಾರ್ಮಿಕ ಸಂಹಿತೆಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಅಗತ್ಯ ನಿಯಮ ಸಿದ್ಧಪಡಿಸಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಕಾರ್ಮಿಕರಿಗೆ ಸಂಬಂಧಿಸಿದ 29 ಕಾಯ್ದೆಗಳು ಚಾಲ್ತಿಯಲ್ಲಿದ್ದು ಇವುಗಳ ಬದಲಿಗೆ 4 ಸಂಹಿತೆ ರೂಪಿಸಲಾಗಿದೆ.
ಕೈಗಾರಿಕಾ ಸಂಹಿತೆ, ಸಾಮಾಜಿಕ ಭದ್ರತಾ ಸಂಹಿತೆ, ವೇತನ ಸಂಹಿತೆ, ವೃತ್ತಿ ಸುರಕ್ಷತೆ, ಆರೋಗ್ಯ, ಸೇವಾ ಷರತ್ತುಗಳ ಸಂಹಿತೆ ಎಂಬ ನಾಲ್ಕು ಸಂಹಿತೆಗಳನ್ನು ಕೇಂದ್ರ ಸರ್ಕಾರ ತರಲು ಉದ್ದೇಶಿಸಿದೆ. 17 ರಾಜ್ಯಗಳಲ್ಲಿ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯದಲ್ಲಿಯೂ ನಿಯಮ ರೂಪಿಸುವ ಕಾರ್ಯ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.