ಗಿಗ್ ಕಾರ್ಮಿಕರು, ಪತ್ರಿಕಾ ವಿತರಕರಿಗೆ ವಿಮೆ: ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

ಧಾರವಾಡ: ಇದೇ ಡಿಸೆಂಬರ್ 16 ರಂದು ಸಂಜೆ ಕೆಸಿಡಿ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಜರುಗಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪರಿಶೀಲಿಸಿದರು.

ವೇದಿಕೆಯ ಸಿದ್ಧತೆ, ಸಾರ್ವಜನಿಕರಿಗೆ, ಗಣ್ಯರಿಗೆ ಹಾಗೂ ಫಲಾನುಭವಿಗಳಿಗೆ ಆಸನದ ವ್ಯವಸ್ಥೆಗಳನ್ನು ಸಚಿವರು ಪರಿಶೀಲಿಸಿದರು. ಸುಮಾರು 20 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ವಿಶೇಷಚೇತನರಿಗೆ 550 ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳನ್ನು, ಕಟ್ಟಡ ಕಾರ್ಮಿಕರ ಮಕ್ಕಳಿಗೆ 200 ಲ್ಯಾಪ್‍ಟ್ಯಾಪ್ ವಿತರಿಸಲಾಗುವುದು. ಅಸಂಘಟಿತ ವಲಯದ ವ್ಯಾಪ್ತಿಯ ಗಿಗ್ ಕಾರ್ಮಿಕರ ಹಾಗೂ ಪತ್ರಿಕಾ ವಿತರಕರಿಗೆ ವಿಮಾ ಘೋಷಿಸಿದ್ದು, ಅವರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಣೆ ಸಹ ಜರುಗಲಿವೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಐದಾರು ಕಡೆ ಪರದೆಯ ವ್ಯವಸ್ಥೆ ಮಾಡಲಾಗುತ್ತಿದೆ. ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಾರ್ಮಿಕ ಇಲಾಖೆಯ ಆಯುಕ್ತ ಡಾ. ಹೆಚ್.ಎನ್. ಗೋಪಾಲಕೃಷ್ಣ, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ವಲಯದ ಕಾರ್ಖಾನೆಗಳ ರವೀಂದ್ರನಾಥ ರಾಠೋಡ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read