ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.
ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.