ಇಂದು ವಿಶ್ವಕಪ್ನ 17ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡ ಸೆಣಸಾಡಲಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತ ತಂಡ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಸಜ್ಜಾಗಿದೆ. ವಿಶ್ವ ಕಪ್ ನಲ್ಲಿ ಭಾರತ ತಂಡ ಬಾಂಗ್ಲಾದೇಶದ ಎದುರು ಸಾಕಷ್ಟು ಬಾರಿ ಜಯಭೇರಿ ಸಾಧಿಸಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ ಭರ್ಜರಿ ಫಾರ್ಮ್ ನಲ್ಲಿದ್ದು, ಈ ವಿಶ್ವ ಕಪ್ ನಲ್ಲಿ ಮತ್ತೊಂದು ದಾಖಲೆ ಬರೆಯುವ ನಿರೀಕ್ಷೆಯಲ್ಲಿದ್ದಾರೆ. ಭಾರತ ತಂಡ ಸತತ ಮೂರು ಪಂದ್ಯಗಳಲ್ಲಿ ಜಯ ಕಂಡಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಭಾರತ ಹಾಗೂ ನ್ಯೂಜಿಲ್ಯಾಂಡ್ ಕಂಡ ತಮ್ಮ ಜಯದ ಹಾದಿಯ ಮೂಲಕ ಈ ಬಾರಿಯ ವಿಶ್ವಕಪ್ ನ ಸೋಲಿಲ್ಲದ ಸರದಾರರಾಗಿದ್ದಾರೆ.