
ಬಳ್ಳಾರಿ : ಬಳ್ಳಾರಿ ಜಿಲ್ಲಾಡಳಿತವು, ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗಿದೆ.
ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನ.19ರ ಭಾನುವಾರದಂದು ನಡೆಯಲಿದ್ದು, ಮ್ಯಾಚ್‍ನ ನೇರ ಪ್ರಸಾರವನ್ನು ಮಧ್ಯಾಹ್ನ 1.30ರಿಂದ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರಿಗೆ ಪಂದ್ಯಾವಳಿಯನ್ನು ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.