alex Certify ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಾಹಿತಿ ಹಂಪನಾ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಾಹಿತಿ ಹಂಪನಾ ಉದ್ಘಾಟನೆ

ಮೈಸೂರು: ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 9:15 ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ನೆರವೇರಿಸಲಾಗುವುದು.

ಹಿರಿಯ ಸಾಹಿತಿ ಪ್ರೊ. ಹಂ.ಪ. ನಾಗರಾಜಯ್ಯ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಹೆಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.  ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ. ಚಾರ್ಜ್, ಈಶ್ವರ್ ಖಂಡ್ರೆ ಮೊದಲಾದವರು ಭಾಗವಹಿಸಲಿದ್ದಾರೆ. ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...