ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ ಮತ ಹಾಕಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದ್ದು, ಇದು ವಿಶ್ವ ದಾಖಲೆಯಾಗಿದೆ.
10,000 ಕೋಟಿ ರೂಪಾಯಿ ಮೌಲ್ಯದ ಗಿಫ್ಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಲೋಕಸಭೆಗೆ 7 ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 64.2 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.