ಯುಕೆ ಮೂಲದ ಮಾರ್ಕೆಟ್ ರಿಸರ್ಚ್ ಫರ್ಮ್ YouGov ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಪುರುಷರ ಪಟ್ಟಿಯಲ್ಲಿ 8ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ಮೂಲಕ ಸಾಕಷ್ಟು ಸೆಲೆಬ್ರಿಟಿಗಳನ್ನು ಹಿಂದೆ ಹಾಕುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ.
ಅಂತಾರಾಷ್ಟ್ರೀಯ ಸಮೀಕ್ಷೆಯಲ್ಲಿ 8ನೇ ಸ್ಥಾನ ಪಡೆಯುವ ಮೂಲಕ ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಚೀನಾದ ಉದ್ಯಮಿ ಜಾಕ್ ಮಾ, ಪೋಪ್ ಪ್ರಾನ್ಸಿಸ್ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಸೇರಿದಂತೆ ಅನೇಕರನ್ನು ಸರಿಗಟ್ಟಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸತತ ಎರಡನೇ ಬಾರಿಗೆ ಮೊದಲನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅನೇಕ ಬಾರಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದ ಅಮೆರಿಕನ್ ಉದ್ಯಮಿ ಬಿಲ್ ಗೇಟ್ಸ್ರನ್ನು 2020ರಲ್ಲಿ ತೀವ್ರ ಪೈಪೋಟಿಯೊಂದಿಗೆ ಹಿಂದಿಕ್ಕಿದ್ದ ಒಬಾಮಾ ಈ ಬಾರಿ ಕೂಡ ಮೊದಲನೇ ಸ್ಥಾನವನ್ನು ಅಲಂಕರಿಸಿದ್ದಾರೆ.
ಈ ವರ್ಷದ ಪಟ್ಟಿಯಲ್ಲಿ ಉದ್ಯಮಿ ಬಿಲ್ ಗೇಟ್ಸ್ ಎರಡನೇ ಸ್ಥಾನದಲ್ಲಿದ್ದರೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಫುಟ್ಬಾಲ್ ದಂತಕತೆ ಕ್ರಿಸ್ಟಿಯಾನೋ ರೊನಾಲ್ಡೋ, ಆ್ಯಕ್ಷನ್ ಸ್ಟಾರ್ ಜಾಕಿ ಚಾನ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಚೀನಾದ ಉದ್ಯಮಿ ಜಾಕ್ ಮಾ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.