ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕ್ಯಾಮೆರಾ ಮ್ಯಾನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಖಾಸಗಿ ಕ್ರೀಡಾ ವಾಹಿನಿಯ ಕ್ಯಾಮರಾ ಮ್ಯಾನ್ ಕಮಲನಾಡಿ ಮುತ್ತು ತಿರುವಳ್ಳುವನ್ ಮೃತಪಟ್ಟವರು. ಶುಕ್ರವಾರ ತಡರಾತ್ರಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯದಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಇಂದು ಬೆಳಗ್ಗೆ ಹಠಾತ್ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ. ಕಮಲನಾಡಿ ಮತ್ತು ಅವರ ನಿಧನಕ್ಕೆ ವೀಕ್ಷಕ ವಿವರಣೆಗಾರ ಹರ್ಷ ಬೋಗ್ಲೆ, ಕ್ರಿಕೆಟಿಗ ದಿನೇಶ್ ಕಾರ್ತಿಕ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಮೃತರಿಗೆ ಗೌರವ ಸೂಚಿಸಿ ಭಾರತ -ಇಂಗ್ಲೆಂಡ್ ತಂಡಗಳ ನಡುವೆ ರಾಂಚಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಛಾಯಾಗ್ರಾಹಕರು ಕಪ್ಪು ಪಟ್ಟಿ ಧರಿಸಿದ್ದರು.