ನವದೆಹಲಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ, ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರೆಸಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನಷ್ಟೇ ಮಾಡಿದ್ದಾರೆ, ಅದಕ್ಕೆ ಪೂರಕವಾದ ಸಾಕ್ಷ್ಯವನ್ನು ಒದಗಿಸಿಲ್ಲ ಎಂದಿದ್ದಾರೆ.
ಕುಸ್ತಿಪಟುಗಳು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ನಂತರ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿ ಇದೆ. 99.9 ಶೇಕಡಾ ಪ್ರಕರಣಗಳಲ್ಲಿ ಎಫ್‌ಐಆರ್ ಆದ ತಕ್ಷಣವೇ ಬಂಧಿಸಲಾಗುವುದಿಲ್ಲ. ಸಿಬಿಐ ಕೂಡ ಚಾರ್ಜ್‌ಶೀಟ್ ಸಲ್ಲಿಸುವಾಗ ಮಾತ್ರ ಬಂಧಿಸುತ್ತದೆ, ಎಫ್‌ಐಆರ್ ನಲ್ಲಿ ಇರುವ ಮಾಹಿತಿಯನ್ನು ನೋಡಿ ಅಲ್ಲ ಎಂದು ಪರ್ತಕರ್ತರಿಗೆ ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸಲಾಗಿದೆ, ಕಾಲಮಿತಿಯೊಳಗೆ ತನಿಖೆ ನಡೆಸುವುದಾಗಿ ಹೇಳಿದೆ. ಆದರೆ ಜಂತರ್‌ಮಂತರ್‌ನಲ್ಲಿ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸದೆ ಬಂಧನಕ್ಕೆ ಒತ್ತಾಯಿಸುವುದು ಸರಿಯಲ್ಲ ಎಂದು ಅಣ್ಣಾಮಲೈ ಹೇಳಿದರು.