alex Certify ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ; ಕ್ಯಾಂಡಲ್ ಮಾರ್ಚ್ ನಡೆಸಿದ ದೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ; ಕ್ಯಾಂಡಲ್ ಮಾರ್ಚ್ ನಡೆಸಿದ ದೀದಿ

ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಂಡಲ್ ಮಾರ್ಚ್ ನಡೆಸಿದರು.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೋಕ್ಸೊ) ಆರೋಪವಿರುವ ಕಾರಣ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಭಾರತ ರಾಷ್ಟ್ರೀಯ ಫುಟ್ಬಾಲ್ ತಂಡದ ಮೊದಲ ನಾಯಕ ಗೋಸ್ತ ಪಾಲ್ ಅವರ ಪ್ರತಿಮೆಯಿಂದ ಕೋಲ್ಕತ್ತಾದ ಮೇಯೊ ರೋಡ್-ಡಫರಿನ್ ರಸ್ತೆ ಕ್ರಾಸಿಂಗ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯವರೆಗೆ ಕ್ಯಾಂಡಲ್ ಮಾರ್ಚ್ ನಡೆಸಿದರು.

ಬಿಜೆಪಿ ದೇಶದ ಪ್ರತಿಯೊಂದು ಕ್ರೀಡಾ ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ, ಅದನ್ನು ಈಗ ಬಿಜೆಪಿ ನಾಯಕರು ಮುನ್ನಡೆಸುತ್ತಿದ್ದಾರೆ. ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ್ದರೂ ಪೊಲೀಸರು ಏನೂ ಮಾಡಿಲ್ಲ. ರಾಜೀನಾಮೆ ನೀಡುವುದಷ್ಟೇ ಅಲ್ಲ, ಬಿಜೆಪಿ ಮುಖಂಡನನ್ನು ಬಂಧಿಸಬೇಕು. ಘಟನೆಯಿಂದ ನಾನು ನಾಚಿಕೆಪಡುತ್ತೇನೆ ಎಂದು ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

“ಕಾನೂನಿನ ಪ್ರಕಾರ ಬಿಜೆಪಿ ನಾಯಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿರುವುದರಿಂದ ಅವರನ್ನು ಬಂಧಿಸಬೇಕು. ‘ಒಂದು ಪಕ್ಷ, ಒಂದು ರಾಷ್ಟ್ರ, ಒಂದು ನಾಯಕ, ಒಂದು ಕಾನೂನು’ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಇರುತ್ತಾರೆ. ಎಲ್ಲರಿಗೂ ಒಂದೇ ಕಾನೂನು ಎಂಬುದಾದರೆ ಕುಸ್ತಿಪಟುಗಳಿಗೆ ಏಕೆ ತಾರತಮ್ಯ ಮಾಡಲಾಗುತ್ತಿದೆ? ಕಾನೂನಿನ ಪ್ರಕಾರ ಇವರಿಗೆ ಯಾಕೆ ನ್ಯಾಯ ಸಿಗುತ್ತಿಲ್ಲ? ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿರುವುದರಿಂದ ನಾವು ಅದಕ್ಕೆ ಆಭಾರಿಯಾಗಿದ್ದೇವೆ. ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ. ಕುಸ್ತಿಪಟುಗಳು ತಮ್ಮ ಹೋರಾಟ ಮುಂದುವರಿಸಲು ನಾನು ವಿನಂತಿಸುತ್ತೇನೆ. ಈ ಹೋರಾಟ ಜೀವನಕ್ಕಾಗಿ, ಸ್ವಾತಂತ್ರ್ಯಕ್ಕಾಗಿ, ಮಾನವೀಯ ನ್ಯಾಯಕ್ಕಾಗಿ, ”ಎಂದು ಅವರು ಹೇಳಿದರು.

ದೆಹಲಿಯಲ್ಲಿ ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಸಂಗೀತಾ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರ ನೇತೃತ್ವದಲ್ಲಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21 ರಂದು ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದರು. ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ನಂತರ ಪೋಕ್ಸೊ ಕಾಯ್ದೆಯಡಿ ಸೇರಿದಂತೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...