ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇ 2024 ದಿನಾಂಕ 22-02-2024 ರನ್ವಯ ಪಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವಲ್ಲಿರುವವರು (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಸದರಿ ನೇಮಕಾತಿಯ ಹುದ್ದೆಗಳ ಸಂಬಂಧ ಲಿಖಿತ ಪರೀಕ್ಷೆಗೆ ದಿನಾಂಕ 08-05-2024 ನ್ನು ತಾತ್ಕಾಲಿಕವಾಗಿ ನಿರ್ದೇಶಿಸಲಾಗಿದೆ.