alex Certify ನ. 5ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ. 5ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)-454 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2023ರ ನವಂಬರ್ 5ರಂದು ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರೆಗೆ ಲಿಖಿತ ಪರೀಕ್ಷೆ ನಡೆಲಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ರೀತಿಯ ಪುಸ್ತಕ, ಕೈಬರಹ ಚೀಟಿ, ಪೇಜರ್, ಕ್ಯಾಲ್ಕುಲೇಟರ್, ಇಯರ್ ಫೋನ್, ಮೊಬೈಲ್ ಪೋನ್‍ಗಳನ್ನು ಪರೀಕ್ಷೆಗೆ ತರದಂತೆ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಬೆಲೆ ಬಾಳುವ ವಸ್ತು ಸಾಮಾಗ್ರಿಗಳನ್ನು ತರದಂತೆ ತಿಳಿಸಲಾಗಿದೆ. ತಮ್ಮ  ವಸ್ತುಗಳಿಗೆ ತಾವೇ ಜವಾಬ್ದಾರರಾಗಿರುತ್ತೀರಿ. ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‍ಅನ್ನು ಸಹ ಕಳುಹಿಸಲಾಗುವುದು.

 ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗಧಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆ ಹಾಜರಾಗಲು ಸೂಚಿಸಿದೆ ಹಾಗೂ ಕರೆ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...