alex Certify ಫೆ.25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ.25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್ಲಾಗ್ 1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಫೆಬ್ರವರಿ, 25 ರಂದು ಬೆಳಗ್ಗೆ 11 ರಿಂದ 12.30 ಗಂಟೆ ವರೆಗೆ ನಡೆಯಲಿದೆ.

ಆದ್ದರಿಂದ ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಹಾಗೂ ಕರೆಪತ್ರದ ಲಿಂಕ್ನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ಹಾಗೂ ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಲು ನಿರ್ದೇಶನ ನೀಡಲಾಗಿದೆ.

ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸಬಾರದು.

ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂ ಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ : ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ಗಳು ಹೊಂದಿರುವ ಬಟ್ಟೆ ಧರಿಸುವುದು ನಿಷೇಧಿಸಲಾಗಿದೆ.

ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಸಿಪಿಸಿ ನೇಮಕಾತಿ ಸಮಿತಿ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...