ಬೆಂಗಳೂರು: ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.
ಎರಡನೇ ಪತ್ನಿ, ಪುತ್ರಿಯ ಮಾಹಿತಿ ನೀಡಿಲ್ಲವೆಂದು ಆರೋಪಿಸಿ ಎಸ್. ಆನಂದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾಗಿ ಆರೋಪಿಸಿ ಕುಮಾರಸ್ವಾಮಿ ವಿರುದ್ಧ ಖಾಸಗಿ ದೂರು ಸಲ್ಲಿಸಲಾಗಿತ್ತು.
ಮೊದಲ ಪತ್ನಿಯ ಜೇವಿತಾವಧಿಯಲ್ಲಿ ಎರಡನೇ ವಿವಾಹಕ್ಕೆ ಮಾನ್ಯತೆ ಇಲ್ಲ. ಪ್ರಮಾಣ ಪತ್ರದಲ್ಲಿ ಮಕ್ಕಳ ಬಗ್ಗೆ ಉಲ್ಲೇಖಿಸಬೇಕೆಂಬ ನಿಯಮವಿಲ್ಲ. ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 125ಎ ಉಲ್ಲಂಘನೆಯಾಗಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿ ನ್ಯಾಯಮೂರ್ತಿ ಜೆ. ಪ್ರೀತ್ ಆದೇಶ ಹೊರಡಿಸಿದ್ದಾರೆ.