alex Certify BIG NEWS: ವಿಶ್ವ ಟೆಸ್ಟ್​ ಚಾಂಪಿಯನ್ ​ಶಿಪ್​ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ʼಟೀಂ ಇಂಡಿಯಾʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಶ್ವ ಟೆಸ್ಟ್​ ಚಾಂಪಿಯನ್ ​ಶಿಪ್​ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ʼಟೀಂ ಇಂಡಿಯಾʼ

ವರ್ಲ್ಡ್​​ ಟೆಸ್ಟ್​ ಚಾಂಪಿಯನ್​ಶಿಪ್​​​​ (2021-2023) ಪಟ್ಟಿಯಲ್ಲಿ ಟೀಂ ಇಂಡಿಯಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. 2ನೇ ಸ್ಥಾನದಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್​ ಇಂಡೀಸ್​​ ತಂಡ ಸ್ಥಾನ ಪಡೆದಿದೆ.

ಇಂಗ್ಲೆಂಡ್​ ವಿರುದ್ಧ ನಡೆದ ಟೆಸ್ಟ್​ ಪಂದ್ಯದ ಮೂಲಕ ಟೀಂ ಇಂಡಿಯಾ 14 ಅಂಕಗಳನ್ನು ಸಂಪಾದಿಸಿತ್ತು. ಒಂದು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಟೀ ಇಂಡಿಯಾ 58.33 ಪಾಯಿಂಟ್​​ ಪರ್ಸೆಂಟೇಜ್​​ ಸಂಪಾದಿಸಿದೆ. ಇನ್ನು ಈ ಪಟ್ಟಿಯಲ್ಲಿ ಇಂಗ್ಲೆಂಡ್​ ತಂಡವು ಪಾಕ್​ ಹಾಗೂ ವೆಸ್ಟ್​​ ಇಂಡೀಸ್​ ನಂತರದ ಸ್ಥಾನದಲ್ಲಿದೆ.

ಪಾಕಿಸ್ತಾನ ಹಾಗೂ ವೆಸ್ಟ್​ ಇಂಡೀಸ್ ತಂಡವು 12 ಅಂಕಗಳನ್ನು ಸಂಪಾದಿಸುವ ಮೂಲಕ 2ನೇ ಸ್ಥಾನದಲ್ಲಿವೆ.

ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಸರಣಿಯಲ್ಲಿ ಮೊದಲ ಟೆಸ್ಟ್​ ಪಂದ್ಯವು ಡ್ರಾನಲ್ಲಿ ಕೊನೆಗಂಡಿತ್ತು. ಆದರೆ 2ನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಟೀಂ ಇಂಡಿಯಾ 151 ರನ್​ಗಳ ಅಂತರದಲ್ಲಿ ಲಾರ್ಡ್ಸ್​ ಕ್ರಿಕೆಟ್​ ಮೈದಾನದಲ್ಲಿ ಗೆಲುವಿನ ನಗೆ ಬೀರಿದೆ. ಟೀಂ ಇಂಡಿಯಾ ಇಂದು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ 3ನೇ ಟೆಸ್ಟ್​ ಪಂದ್ಯದಲ್ಲಿಯೂ ಜಯಭೇರಿ ಬಾರಿಸುವ ವಿಶ್ವಾಸದಲ್ಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...